ರಾಜ್ಯದಲ್ಲಿ ಹೋಂ ಐಸೊಲೇಷನ್ ಹೆಚ್ಚು ಪ್ರಮುಖವಾದುದು ಏಕೆ?

ಬೆಂಗಳೂರು| Ramya kosira| Last Modified ಶುಕ್ರವಾರ, 14 ಜನವರಿ 2022 (06:47 IST)

ರಾಜ್ಯದಲ್ಲಿ ಹೋಂ ಐಸೊಲೇಷನ್ ನಲ್ಲಿ ಇರುವವರ ಮೇಲ್ವಿಚಾರಣೆಗೆ ತಂತ್ರಜ್ಞಾನದ ಬಳಕೆಯನ್ನು ಪ್ರಧಾನಿಯವರು ಶ್ಲಾಘಿಸಿದರು ಎಂದು ಹೇಳಿದ್ದಾರೆ.									    

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅಲೆ ಫೆಬ್ರವರಿ ತಿಂಗಳಲ್ಲಿ ಅತ್ಯಂತ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಮೊದಲ ಹಾಗೂ ಎರಡನೇ ಅಲೆಯನ್ನು ಎದುರಿಸಿದ ಅನುಭವದ ಆಧಾರದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.


ಮೂರನೇ ಅಲೆಯ ಸಂದರ್ಭದಲ್ಲಿ ಶೇ.94ಕ್ಕೂ ಹೆಚ್ಚು ಸೋಂಕಿತರು ಹೋಮ್ ಐಸೊಲೇಷನ್ ನಲ್ಲಿ ಇದ್ದಾರೆ. ಆದ್ದರಿಂದ ಅವರಲ್ಲಿ ವಿಶ್ವಾಸ ಮೂಡಿಸುವ ಹಾಗೂ ಅವರಿಗೆ ಔಷಧ ಪೂರೈಕೆಯೂ ಸೇರಿದಂತೆ ಸೂಕ್ತ ಆರೈಕೆಯನ್ನು ಖಾತರಿಪಡಿಸಲು ಆದ್ಯತೆ ನೀಡುವಂತೆ ಪ್ರಧಾನಿಯವರು ತಿಳಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :