ಬೆಂಗಳೂರು : ಶಿವಮೋಗ್ಗ ಲೋಕಸಭಾ ಉಪಚುನಾವಣೆಗೆ ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರನ್ನು ಕಣಕ್ಕೀಳಿಸಲು ನಟ ಶಿವರಾಜ್ ಕುಮಾರ್ ಹಿಂದೇಟು ಹಾಕುತ್ತಿದ್ದಾರಂತೆ. ಹೌದು ಬಿ.ಎಸ್.ಯಡಿಯೂರಪ್ಪರ ರಾಜೀನಾಮೆಯಿಂದ ತೆರವಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿರುವ ವಿಚಾರ ಈಗಾಗಲೇ ತಿಳಿದಿದೆ. ಹಾಗೇ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಶಿವಮೊಗ್ಗ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಆದಕಾರಣ ಜೆಡಿಎಸ್ ನಿಂದ ಗೀತಾ ಅವರನ್ನು ಕಣಕ್ಕಿಳಿಸಲು ಮಾಜಿ ಪ್ರಧಾನಿ ದೇವೇಗೌಡರು ಪ್ಲಾನ್ ಮಾಡಿದ್ದರು.