ಒಂದೆಡೆ ಯಡಿಯೂರಪ್ಪನವರ ಆಪರೇಷನ್ ಕಮಲದ ಆಡಿಯೋ ಚರ್ಚೆಯಾಗುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಈಗ ಸಿಎಂ ವಾಸ್ತವ್ಯದ ವಿಷಯ ಕೆದಕಿದೆ.ಸ್ಟಾರ್ ಹೊಟೇಲ್ ನಲ್ಲಿ ವಾಸ ಮಾಡುತ್ತಾ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಡಳಿತ ನಡೆಸುತ್ತಿದ್ದಾರೆ. ಹೀಗಂತ ಬಿಜೆಪಿ ಗಂಭೀರವಾಗಿ ಆರೋಪ ಮಾಡಿದೆ.ಕಲಬುರಗಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಸಿಎಂ ಸ್ಟಾರ್ ಹೊಟೇಲ್ ನಲ್ಲಿದ್ದುಕೊಂಡೇ ಆಡಳಿತ ನಡೆಸುತ್ತಿದ್ದಾರೆ. ಈ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಒತ್ತಾಯಿಸಿದರು.ಕುಮಾರಸ್ವಾಮಿಯವರು ಯಡಿಯೂರಪ್ಪನವರ ಹೆಸರು