ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಏಕೆ ರಾಜೀನಾಮೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಹಲವು ಸಚಿವರ ವಿರುದ್ಧ ಸಿಬಿಐ ತನಿಖೆ ನಡೆದಿದೆ. ಕೇಂದ್ರ ಸಚಿವರು ರಾಜೀನಾಮೆ ಕೊಟ್ಟಿದ್ದಾರಾ? ಅವರು ರಾಜೀನಾಮೆ ಕೊಡದಿದ್ದ ಮೇಲೆ ಜಾರ್ಜ್ ಏಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದ್ದಾರೆ. ಸಚಿವ ಜಾರ್ಜ್ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಹಿಂದೆ ಸಿಐಡಿ ತನಿಖೆಯ ವೇಳೆ ಅಧಿಕಾರಿಗಳ ಮೇಲೆ ಪ್ರಭಾವ ಬೀರಬಹುದು ಎನ್ನುವ