ಚಿಕ್ಕಬಳ್ಳಾಪುರ: ಪತಿಯ ಹತ್ಯೆಗೆ ಸುಪಾರಿ ಕೊಟ್ಟು ಬಳಿಕ ಪತಿಯ ಜೊತೆಗೇ ಪೊಲೀಸ್ ಠಾಣೆಗೆ ಬಂದು ದೂರು ಕೊಡುವ ನಾಟಕವಾಡಿ ಪತ್ನಿ ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.ಕಚೇರಿಗೆ ಸಹೋದ್ಯೋಗಿಗಳೊಂದಿಗೆ ಕಾರಿನಲ್ಲಿ ಹೋಗುವಾಗ ಅಡ್ಡಗಟ್ಟಿದ್ದ ಆರೋಪಿಗಳು ದಾಳಿ ನಡೆಸಿ ಹತ್ಯೆಗೆ ಪ್ರಯತ್ನಿಸಿದ್ದರು. ಆದರೆ ಕಾರಿನ ಡೋರ್ ಲಾಕ್ ಆಗಿದ್ದರಿಂದ ಕೇವಲ ಗಾಜು ಒಡೆದಿತ್ತಷ್ಟೇ. ದುಷ್ಕೃತ್ಯಕ್ಕೆ ಮುಂದಾಗುವ ಮೊದಲೇ ಸ್ಥಳೀಯರು ಬಂದಿದ್ದರಿಂದ ಆರೋಪಿಗಳು ಪರಾರಿಯಾಗಿದ್ದಾರೆ.ಈ ಸಂಬಂಧ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ವಿಚಾರಣೆ ನಡೆಸಿ