ಹಾಸನ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.ಯುವತಿಗೆ ಆರು ವರ್ಷಗಳ ಹಿಂದೆ ಕೊಲೆಗೀಡಾದ ವ್ಯಕ್ತಿ ಜೊತೆ ಪ್ರೇಮ ವಿವಾಹವಾಗಿತ್ತು. ಇತ್ತೀಚೆಗೆ ಆಕೆಗೆ ಇನ್ನೊಬ್ಬನೊಂದಿಗೆ ಅನೈತಿಕ ಸಂಬಂಧವಿತ್ತು. ಇದಕ್ಕೆ ಗಂಡ ಅಡ್ಡಿಯಾಗಿದ್ದ.ಈ ಕಾರಣಕ್ಕೆ ಪ್ರಿಯಕರ ಹಾಗೂ ಆತನ ಗೆಳೆಯರ ಜೊತೆ ಸೇರಿಕೊಂಡು ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಗಂಡನನ್ನು ಕೊಲೆ ಮಾಡಿಸಿ ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದಳು. ಆದರೆ ವಿಚಾರಣೆಯಿಂದ ಸತ್ಯ ಹೊರಗೆ ಬಂದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.