ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷ ಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಸೂಚನೆಗಾಗಿ ಕಾಂಗ್ರೆಸ್ ನಾಯಕರು ಕಾಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಆಯ್ಕೆಯಾದರೂ ಕೂಡ ಸಿದ್ದರಾಮಯ್ಯ ಅವರು ಪಟ್ಟುಹಿಡಿದ 4 ಕಾರ್ಯಾಧ್ಯಕ್ಷ ಹುದ್ದೆಯ ವಿಚಾರದ ಬಗ್ಗೆ ಭಾರೀ ಗೊಂದಲ ಏರ್ಪಟ್ಟಿದೆ. ಆದ್ದರಿಂದ ಕಾರ್ಯಾಧ್ಯಕ್ಷ ಸ್ಥಾನದ ಕುರಿತು ಇಂದು ಹೈಕಮಾಂಡ್ ಅಂತಿಮ ನಿರ್ಧಾರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಚರ್ಚೆ ನಡೆಸಲು ಈಗಾಗಲೇ ಸಿದ್ದರಾಮಯ್ಯ ಬಣ