ಹುಬ್ಬಳ್ಳಿ :ಶನಿವಾರ ಪ್ರಾರಂಭಗೊಂಡ ಪಕ್ಷದ ಕಾರ್ಯಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪಾಲ್ಗೊಂಡಿದ್ದು, ಜಗದೀಶ್ ಶೆಟ್ಟರ್ ಕಾರ್ಯಕ್ರಮದಿಂದ ದೂರವುಳಿದಿದ್ದಾರೆ. ಅವರಿಗೆ ಬೆಂಗಳೂರಿನಲ್ಲಿ ಮಹತ್ವದ ಕೆಲಸವಿದ್ದ ಕಾರಣ ಕಾರ್ಯಕ್ರಮಕ್ಕೆ ಬಂದಿಲ್ಲಎಂದು ಪ್ರಲ್ಹಾದ್ ಜೋಶಿ ಸಬೂಬು ಹೇಳಿದ್ದರೂ ಸಹ ಕಾರ್ಯಕರ್ತರ ನಡುವೆ ಈ ಬಗ್ಗೆ ಸಂಶಯ ವ್ಯಕ್ತವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಳಿಕ ಮತ್ತೆ