ಕೊಪ್ಪಳ: ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸುತ್ತಿರುವ ಕಂಪ್ಯೂಟರ್ ವಿತರಣೆಯಲ್ಲಿ ಭಾರಿ ಭ್ರಷ್ಟಾಚಾರವಾಗಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ವಿಪಕ್ಷಗಳು ಆರೋಪವನ್ನು ಸಾಬೀತುಪಡಿಸಿದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.