ನಾನು ಲೋಕಸಭಾ ಚುನಾವಣೆಯಲ್ಲಿ ನಾನು ತಟಸ್ಥವಾಗಿದ್ದೆ. ಯಾರ ಪರವೂ ನಾನು ಕೆಲಸ ಮಾಡಿಲ್ಲ. ನಾನು ನಮ್ಮ ಪಕ್ಷದ ನಾಯಕರಿಗೆ ತಟಸ್ಥವಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದೆ ಅಂತ ಕೈ ಪಡೆ ಮುಖಂಡ ಹೇಳಿದ್ದಾರೆ.ಮಂಡ್ಯದ ಮಳವಳ್ಳಿಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪಿ.ಎಂ.ನರೇಂದ್ರಸ್ವಾಮಿ ಹೇಳಿಕೆ ನೀಡಿದ್ದು, ನಾನು ತಟಸ್ಥವಾಗಿರುವ ವಿಚಾರವನ್ನು ಚುನಾವಣೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಗೆ ತಿಳಿಸಿದ್ದೆ. ನನಗೆ ಹಿಡಿಸದ, ಉಸಿರುಗಟ್ಟುವ ವಾತಾವರಣದಲ್ಲಿ ನಾನು ಇರಲ್ಲ. ಮಳವಳ್ಳಿ ಕ್ಷೇತ್ರದ ಕಾಂಗ್ರೆಸ್ಸಿಗರ ಧ್ವನಿಯಾಗಿ ನಾನಿದ್ದೆ. ನಾನು