ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ಮತ್ತೊಂದು ನೋಟಿಸ್ ಜಾರಿ ಮಾಡಿದ್ದು, ನಿಮ್ಮ ಮೇಲೆ ನಾವು ಏಕೆ ಕ್ರಮ ಜರುಗಿಸಬಾರದು ಎಂದು ಪ್ರಶ್ನಿಸಿದೆ. ಎರಡು ದಿನಗಳ ಹಿಂದೆ ನೀಡಿದ್ದ ನೋಟಿಸ್ಗೆ ಯಾವುದೇ ಉತ್ತರ ನೀಡಿಲ್ಲ. ಹೀಗಾಗಿ ಎರಡನೇ ನೋಟಿಸ್ ನೀಡುತ್ತಿದ್ದೇವೆ. ಒಂದು ವೇಳೆ, ಇದಕ್ಕೂ ಪ್ರತಿಕ್ರಿಯೆ ಬಾರದಿದ್ದರೆ ಗೃಹ