ಕಲುಷಿತ ನೀರು ಸೇವಿಸಿ ವಾಂತಿ, ಭೇದಿ ಉಲ್ಬಣವಾಗಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ನೀರು ಪೂರೈಸುವ ಪೈಪ್ನಲ್ಲಿ ಚರಂಡಿ ನೀರು ಸೇರ್ಪಡೆಯಾದ ಪರಿಣಾಮ ಕಲುಷಿತ ನೀರು ಸೇವನೆಯಿಂದ ಗ್ರಾಮದಲ್ಲಿ ವಾಂತಿ, ಭೇದಿ ಉಲ್ಬಣವಾಗಿದೆ. ಗ್ರಾಮದ 30 ಜನರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ನಿನ್ನೆ 24 ಜನರಿಗೆ ,ಇಂದು 6 ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಅದರಲ್ಲಿ ಚಿಕಿತ್ಸೆ