ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕೊರೊನಾ ರಣಕೇಕೆ ಆರಂಭವಾಗಿದ್ದು, 16 ದಿನಗಳ ಬಳಿಕ ಮತ್ತೆ ಕೊರೊನಾಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಆದರೆ ಸಾವಿನ ಸಂಖ್ಯೆ ಶೂನ್ಯ ಪ್ರಮಾಣದಲ್ಲಿತ್ತು. ಆದರೆ ಈಗ ಮತ್ತೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ 72 ವರ್ಷದ ಮಹಿಳೆ ಬಲಿಯಾಗಿದ್ದಾರೆ. ಬೆಂಗಳೂರಿನ ನಿವಾಸಿಯಾಗಿರುವ ಇವರು ಕೆಲ ದಿನಗಳಿಂದ ಜ್ವರ ಮತ್ತು ಕೆಮ್ಮು ಹಾಗೂ