ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು 3 ಮಕ್ಕಳಿಗೆ ವಿಷ ಉಣಿಸಿ ಮಹಿಳೆ ತಾನೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ. ಖಾಸಗಿ ಕ್ಲಿನಿಕ್ನಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಉಸ್ನಾ ಕೌಸರ್ ಎಂಬಾಕೆ ತನ್ನ 3 ಜನ ಮಕ್ಕಳಿಗೆ ವಿಷ ಉಣಿಸಿ ,ಕಣ್ಣೆದುರೇ ಮಕ್ಕಳು ಮೃತಪಟ್ಟ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚನ್ನಪಟ್ಟಣದಲ್ಲಿ ಕಾರ್ ಮೆಕಾನಿಕ್ ಆಗಿದ್ದ ಗಂಡ ಅಖಿಲ್ ಅಹಮದ್