ನೆಲಮಂಗಲದ ಬಳಿ ಸೋಮವಾರ ಸಂಭವಿಸಿದ ಬಸ್ ಅಗ್ನಿದುರಂತದಲ್ಲಿ ಗಾಯಗೊಂಡಿದ್ದ ಮಮತಾ ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆ ವೀರಾಪುರ ಗ್ರಾಮದ ಮಮತಾ 70 ಪ್ರತಿಶತ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಅವರ ಪುತ್ರ 5 ವರ್ಷದ ಯಶವಂತ್ ಈಗ ಸುಧಾರಿಸಿಕೊಂಡಿದ್ದಾನೆ. ಚಿಕ್ಕಮಗಳೂರಿನಿಂದ ಬೆಂಗಳೂರಿನ ಕಡೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಒಬ್ಬ ಮಹಿಳೆ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆ