ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಪದೇ ಪದೇ ಪ್ರತಿಭಟನೆ ಮಾಡ್ತಾನೇ ಬರ್ತಿದ್ದಾರೆ. ಆದರೆ ಸಂಬಂಧಿಸಿದ ಅಧಿಕಾರಿಗಳು, ಸರ್ಕಾರ ಇದುವರೆಗೂ ಅವರ ಬೇಡಿಕೆಗೆ ಸ್ಪಂದಿಸಿಲ್ಲ. ಹೀಗಾಗಿ ಮತ್ತೆ ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ.ಯಾದಗಿರಿ ಜಿಲ್ಲೆಯ ಆಶಾಕಾರ್ಯಕರ್ತೆಯರು ಜಿಲ್ಲಾಡಳಿತ ಭವನ ಮುಂದೆ ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಈಡೇರಿಸುವಂತೆ ಒತ್ತಾಯಿಸಿ ಅಹೋ ರಾತ್ರಿ ಪ್ರತಿಭಟನೆ ಆರಂಭಿಸಿದ್ದಾರೆ.ಹಲವು ತಿಂಗಳಿಂದ ಬಾಕಿ ಇರುವ ಪ್ರೋತ್ಸಾಹ ಧನ ನೀಡಬೇಕು, ನಿರಂತರವಾಗಿ ಕೆಲಸ ಮಾಡುತ್ತಿರುವ