ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮ್ಯಾರಾಥಾನ್ ನಡೆದು ಗಮನ ಸೆಳೆಯಿತು. ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಲಬುರಗಿ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಹಾಗೂ ಪತಂಜಲಿ ಯೋಗ ಸಮಿತಿ ಕಲಬುರಗಿ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ಮ್ಯಾರಾಥಾನ್ಗೆ ಜಗತ್ ವೃತ್ತದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.ಮಹಿಳಾ ಪತಂಜಲಿ ಯೋಗ ಸಮಿತಿಯಿಂದ ಸೂರ್ಯ ನಮಸ್ಕಾರದೊಂದಿಗೆ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಈ ಮ್ಯಾರಾಥಾನ್