ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ ಇಬ್ರಾಹಿಂ ಕುಟುಂಬದ ಮೇಲೆ ಮೇಲೆ ಭ್ರೂಣ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದರು, ಅದು ತಪ್ಪೇ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಭರವಸೆ ನೀಡಿದ್ದಾರೆ. ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗಕ್ಕೆ ದೂರು ನೀಡಿದರೆ ದೂರು ಸ್ವೀಕರಿಸುತ್ತೇವೆ. ಇಲ್ಲದಿದ್ದರೆ, ನಾವೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆ ಎಂದರು.