ಬೆಂಗಳೂರು : ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸೋ ಕೆಲಸ ಸಮರ್ಪಕವಾಗಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಡಿಸಿ, ಸಿಇಒಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಡಿಸಿ, ಸಿಇಒಗಳ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3 ಜಿಲ್ಲೆಗಳಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿದ್ದಾರೆ, ಅಸ್ವಸ್ಥರಾಗಿದ್ದಾರೆ. ಚಿತ್ರದುರ್ಗದಲ್ಲಿ ಕಲುಷಿತ ನೀರು ಕುಡಿದು 6 ಜನ ಸತ್ತಿದ್ದಾರೆ. ಇಂತಹ