ಬೆಂಗಳೂರು(ಜು.30): ತಮಗೆ ರಾಜ್ಯಪಾಲ ಹುದ್ದೆ ಬೇಡ, ಸಕ್ರಿಯ ರಾಜಕಾರಣದಿಂದ ದೂರ ಸರಿಯುವುದಿಲ್ಲ ಎಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವ ಮೊದಲು ಹೇಳಿದ್ದ ಬಿ.ಎಸ್.ಯಡಿಯೂರಪ್ಪ ಅವರು ಇದೀಗ ರಾಜ್ಯ ಪ್ರವಾಸ ಕೈಗೊಳ್ಳಲು ಮುಂದಾಗಿದ್ದಾರೆ. * ಗಣೇಶ ಚತುರ್ಥಿಯ ಬಳಿಕ ಎಲ್ಲ ಜಿಲ್ಲೆಗಳಿಗೂ ಪ್ರವಾಸ: ಬಿಎಸ್ವೈ * ಅಧಿಕಾರ ಇಲ್ಲದಿದ್ದರೂ ಕೆಲಸ ಮಾಡಿ ತೋರಿಸುವೆ ‘ಬರುವ ಗಣೇಶ ಚತುರ್ಥಿ ಹಬ್ಬದ ಬಳಿಕ ನಾನು ವಿವಿಧ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುತ್ತೇನೆ’ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.