ಹೈದ್ರಾಬಾದ ಕರ್ನಾಟಕ ಪ್ರದೇಶದ ಸಮಗ್ರ ಇತಿಹಾಸ ರಚಿಸುವ ನಿಟ್ಟಿನಲ್ಲಿ ಶೀಘ್ರವೇ ಕಾರ್ಯಾಗಾರ ಏರ್ಪಡಿಸಿ ಪರಿಣಿತರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿ ಇತಿಹಾಸ ರಚನೆಗೆ ಮುಂದುವರೆಯಬೇಕು ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಹೇಳಿದರು.ಕಲಬುರಗಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ, ಹೈದ್ರಾಬಾದ ಕರ್ನಾಟಕ ಪ್ರದೇಶದ ಇತಿಹಾಸ ರಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೈದ್ರಾಬಾದ ಕರ್ನಾಟಕದ ಇತಿಹಾಸದ ಮಾಹಿತಿ ಸಂಗ್ರಹಣೆ ಸುಲಭವಾದ ಕೆಲಸವಲ್ಲ. ಈ ಭಾಗದ ಎಲ್ಲ ವಿಷಯಗಳನ್ನು ಸಂಗ್ರಹಿಸುವುದು ಅವಶ್ಯಕವಾಗಿದೆ.