ಚಿಕ್ಕಬಳ್ಳಾಪುರದಲ್ಲಿ ಆಯೋಜನೆಯಾಗಿರುವ ಮೆಗಾ ಆರೋಗ್ಯ ಮೇಳ ಹೊಸ ವಿಶ್ವದಾಖಲೆ ಸೃಷ್ಟಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಸಂಸ್ಥೆಯ ಆವರಣದಲ್ಲಿ ಮೆಗಾ ಆರೋಗ್ಯ ಮೇಳದ ಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಒಂದೇ ಸೂರಿನಡಿ ಆರೋಗ್ಯ ಸಂಬಂಧಿತ ಎಲ್ಲಾ ವ್ಯವಸ್ಥೆಗಳು ದೊರೆಯಲಿದ್ದು, ಒಂದೂವರೆ ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ ಎಂದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,