ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ಗಾಂಧಿ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿ ವಿಚಾರಣೆ ನಡೆಸಿರುವುದನ್ನು ಖಂಡಿಸಿ,ದೆಹಲಿಯ ಎಐಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವುದು ನೀಚ ರಾಜಕಾರಣ, ಇದು ತುರ್ತು ಪರಿಸ್ಥಿತಿಗೂ ಮೀರಿದ ಹೀನಾಯ ಸ್ಥಿತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಮ್ಮ ನಾಯಕರು ಯಾವುದೇ ತಪ್ಪು ಮಾಡಿಲ್ಲ. ಅಂದ ಮೇಲೆ