ಮೈಸೂರು ಜನರ ಹಾಗೂ ರಾಜಮನೆತನದ ವಿರೋಧದ ನಡುವೆಯೂ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ಡೌನ್ ಕಟ್ಟಡವನ್ನು ನೆಲಸಮ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಸಾಥ್ ನೀಡಿರುವ ವ್ಯಾಪಾರಸ್ಥರು ಅಂಗಡಿಗಳನ್ನು ಬುಧವಾರ ಮಧ್ಯಾಹ್ನದವರೆಗೆ ಬಂದ್ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಮಾತನಾಡಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, 3 ವರ್ಷದಿಂದ ನಿಮ್ಮ ಜತೆಯಲ್ಲಿ ನಿಂತು