ಯಾದಗಿರಿ: ಯಾದಗಿರಿಯಲ್ಲಿ ತೆಲಂಗಾಣ ಶಾಸಕ ರಾಜಾಸಿಂಗ್ ಠಾಕೂರ್ ಪ್ರಚೋದನಾಕಾರಿ ಭಾಷಣ ಮಾಡಿರುವುದರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ತೀರ್ಮಾನಿಸಿದ್ದಾರೆ. ಶ್ರೀರಾಮ ಸೇನೆ ಮಂಗಳವಾರ ಸಂಜೆ ಆಯೋಜಿಸಿದ್ದ ಹಿಂದೂ ವಿರಾಟ್ ಸಮಾವೇಶದಲ್ಲಿ ರಾಜಾಸಿಂಗ್ ಠಾಕೂರ್, ಆಕ್ಷೇಪಾರ್ಹ ಭಾಷಣ ಮಾಡಿದ್ದ. ಹಿಂದೂ ವಿರಾಟ್ ಸಮಾವೇಶದಲ್ಲಿ ಪ್ರತಿಯೊಬ್ಬ ಹಿಂದೂ ಲಾಠಿ, ತಲವಾರ್ ಇಟ್ಟುಕೊಂಡಿರಬೇಕು ಅಂತ ಹೇಳಿಕೆ ನೀಡಿದ್ದ. ಈಗ ವಿವಾದದ ಕಿಡಿ ಹೊತ್ತಿಸಿದ ಶಾಸಕರ ವಿರುದ್ಧ ಪ್ರಕರಣ ದಾಖಲಾಗಲಿದೆ. ಕೋಮುದಳ್ಳುರಿಯಲ್ಲಿ ಕರಾವಳಿ ಪ್ರದೇಶ