ಬಹುದಿನಗಳ ವೈಮನಸ್ಸು ಮರೆತು ಒಂದಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ನವದೆಹಲಿಯಿಂದ ಒಂದೇ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಯಣ್ಣ ಬ್ರಿಗೇಡ್ ಬಿಕ್ಕಟ್ಟಿನಿಂದಾಗಿ ಪರಸ್ಪರ ದೂರವಾಗಿದ್ದ ಉಭಯ ನಾಯಕರನ್ನು ಒಂದುಗೂಡಿಸುವಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಫಲರಾಗಿದ್ದು, ರಾಜ್ಯ ಬಿಜೆಪಿ ಪಾಳಯದಲ್ಲಿನ ಆಂತರಿಕ ಕಲಹ ತಾತ್ಕಾಲಿಕವಾಗಿ ಶಮನಗೊಂಡಿದೆ. ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಂಧಾನ ಸಭೆ