ಶಿವರಾಮ ಕಾರಂತ ಲೇಔಟ್ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ನಾಳೆ ಹಾಜರಾಗುವಂತೆ ನೀಡಿದ್ದ ಸಮನ್ಸ್ ಅನ್ನ ಎಸಿಬಿ ಹಿಂಪಡೆದಿದೆ. ಎಸಿಬಿಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೈಕೊರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ಆಗಸ್ಟ್ 28ರವರೆಗೆ ವಿಚಾರಣೆ ಮುಂದೂಡಿದೆ. ವಿಚಾರಣೆ ಮುಗಿಯುವವರೆಗೂ ಬಂಧಿಸದಂತೆ ಹೈಕೋರ್ಟ್ ತಾಕೀತು ಮಾಡಿದ ಹಿನ್ನೆಲೆಯಲ್ಲಿ ಎಸಿಬಿ ಸಮನ್ಸ್ ವಾಪಸ್ ಪಡೆದಿದೆ.ಡಾ.