ಬೆಂಗಳೂರು: ಮೈಸೂರು ರಾಜ ವಂಶಸ್ಥರ ಕುಟುಂಬಕ್ಕೆ ಹೊಸ ಯುವರಾಜನ ಆಗಮನವಾಗಿದೆ. ತಂದೆಯಾದ ಖುಷಿಯಲ್ಲಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಯದುವೀರ್ ಪತ್ನಿ ತ್ರಿಷಿಕಾ ಕುಮಾರಿ ನಿನ್ನೆ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಹಿನ್ನಲೆಯಲ್ಲಿ ಮೈಸೂರು ಅರಮನೆ ಸುತ್ತ ಅಭಿಮಾನಿಗಳು ಸಂಭ್ರಮಾಚರಿಸುತ್ತಿದ್ದಾರೆ.ಇದರ ನಡುವೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಜ ಯದುವೀರ್, ನನಗೆ ತುಂಬಾ ಖುಷಿಯಾಗುತ್ತಿದೆ. ರಾಜ್ಯದೆಲ್ಲೆಡೆಯಿಂದ ಶುಭಾಷಯ ಹರಿದುಬರುತ್ತಿದೆ. ಮನೆಯಲ್ಲಿ ಎಲ್ಲರಿಗೂ ಖುಷಿಯಾಗಿದೆ. ಶುಭಾಷಯ