ಯರಗಟ್ಟಿ ಶುಗರ್ಸ್ಗೆ ಕಬ್ಬಿನ ಕ್ಷೇತ್ರದ ನಿಗದಿ ಮಾಡುವ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಾರ್ಖಾನೆಗೆ 13 ಗ್ರಾಮಗಳ ಕಬ್ಬಿನ ಕ್ಷೇತ್ರದ ನಿಗದಿಗೆ ಸಚಿವ ಸಂಪುಟ