ಗದಗ-ಮೂವರು ಅಭಿಮಾನಿಗಳ ಸಾವಿನ್ನಪ್ಪಿದ ದುರ್ಘಟನೆ ಮಾಸುವ ಮುನ್ನವೇ ರಾಕಿಂಗ್ ಸ್ಟಾರ್ ಯಶ್ ಮತ್ತೋರ್ವ ಅಭಿಮಾನಿ ಇಂದು ಮೃತಪಟ್ಟಿದ್ದಾರೆ. ಮೃತನನ್ನು ನಿಖಿಲ್ ಗೌಡ ಎಂದು ಗುರುತಿಸಲಾಗಿದ್ದು, ಈತ ಗದಗದ ಬಿಂಕದಕಟ್ಟಿ ನಿವಾಸಿ. ಈತ ಲಕ್ಷ್ಮೇಶ್ವರ ಅಗಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿ. ಗದಗ ಜಿಲ್ಲೆ ಸೊರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬದ ಅಂಗವಾಗಿ ತಡರಾತ್ರಿ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಮುರಳಿ, ನವೀನ್, ಹನುಮಂತ ಎಂಬ ಮೂವರು ನಿಧನರಾಗಿದ್ದು, ಉಳಿದ