‘ಕೆಜಿಎಫ್-2’ ಬಿಡುಗಡೆಗೂ ಮುನ್ನ ರಾಕಿಂಗ್ ಸ್ಟಾರ್ ಯಶ್, ಚಿತ್ರತಂಡದ ಜೊತೆ ಟೆಂಪಲ್ ರನ್ಗೆ ಮುಂದಾಗಿದ್ದಾರೆ. ಕರಾವಳಿಯ ಇತಿಹಾಸ ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿದ ನಟ ಯಶ್ ಬಳಿಕ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಕೆ.ಜಿ.ಎಫ್ ನಿರ್ಮಾಪಕ ವಿಜಯ್ ಕಿರಂಗದೂರು ಜೊತೆ ಭೇಟಿ ನೀಡಿದ ನಟ ಯಶ್, ಸುಬ್ರಹ್ಮಣ್ಯ