ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಕರ್ನಾಟಕದ ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ವಿಜಯಪುರ ಸೇರಿದಂತೆ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿತ್ತು.ಈ ವಿಚಾರವಾಗಿ ಮೈಸೂರಿನ ವಿಮಾನ ನಿಲ್ದಾಣಕ್ಕೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವಿಟರ್ನಲ್ಲಿ ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ.