ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರಕಾರ ನಿಶ್ಚಿತ. ಯಡಿಯೂರಪ್ಪ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ಮಾಧ್ಯಮ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಈಗ ಅಧಿಕಾರದಲ್ಲಿ ಉಳಿದುಕೊಂಡಿರುವುದು ಕರ್ನಾಟಕ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮಾತ್ರ. ಹೀಗಾಗಿ ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಅದು ತನ್ನೆಲ್ಲ ಶಕ್ತಿಯನ್ನು ಬಳಕೆ ಮಾಡುತ್ತದೆ. ಕರ್ನಾಟಕ ನಮಗೆ ಸುಲಭದ ತುತ್ತಲ್ಲವಾದರೂ ಬಿಜೆಪಿ ಮರಳಿ ಅಧಿಕಾರ ಪಡೆಯುವುದು ನಿಶ್ಚಿತ.