ರಾಜ್ಯ ಬಜೆಟ್ ನಲ್ಲಿ ಮಾಜಿ ಸಿಎಂ ತವರು ಜಿಲ್ಲೆಗೆ ಹಾಲಿ ಸಿಎಂ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ರೇಷ್ಮೆ ನಾಡು ರಾಮನಗರ ಜಿಲ್ಲೆಯಲ್ಲಿ ರೇಷ್ಮೆಯ ಉಪ ಉತ್ಪನ್ನಗಳ ಮೌಲ್ಯವರ್ಧನೆಗಾಗಿ ಜಿಲ್ಲೆಯಲ್ಲಿನ ಕಣ್ವ ಫಾರ್ಮ್ನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ರೇಷ್ಮೆ ಹುಳು ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಹೀಗಂತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2020-21ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಾರೆ.ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ ಆಯವ್ಯಯದಲ್ಲಿ ರಾಮನಗರ ಜಿಲ್ಲೆಯಲ್ಲಿ ಪ್ರತಿ ದಿನ 30