ಬಿಜೆಪಿ ಉಚ್ಚಾಟನೆಗೊಂಡಿರುವ ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಳ ಯತ್ನಾಳ ಅವರೊಂದಿಗೆ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ವಿಜಯಪುರದ ಪ್ರವಾಸಿ ಮಂದಿರದಲ್ಲಿ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ಯಡಿಯೂರಪ್ಪ ಅವರಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುವ ಇಂಗಿತವನ್ನು ಬಸನಗೌಡ ಪಾಟೀಲ ವ್ಯಕ್ತಪಡಿಸಿದ್ದು, ಆದ್ದರಿಂದ ಪಕ್ಷದಿಂದ ಮಾಡಿರುವ ಉಚ್ಚಾಟನೆಯನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಯಡಿಯೂರಪ್ಪ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಸೇರ್ಪಡೆಗೊಳ್ಳಲು ದೆಹಲಿ ಹಾಗೂ ಬೆಂಗಳೂರು ಕಡೆಯಿಂದ ಅನುಮತಿ ದೊರೆತಿದ್ದು,