ಬಿಜೆಪಿ ಪಕ್ಷಕ್ಕೆ ಬೇರೆ ಪಕ್ಷಗಳಿಂದ ಬರುವವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆ ನೀಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಿರುವ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಪಕ್ಷದ ತತ್ವ-ಸಿದ್ಧಾಂತ, ನಾಯಕತ್ವ ಒಪ್ಪಿಕೊಂಡು ಪಕ್ಷದಲ್ಲಿ ಯಾವುದೇ ಸ್ಥಾನಮಾನ ನಿರೀಕ್ಷೆ ಇಟ್ಟುಕೊಳ್ಳದೆ ಬರುವವರಿಗೆ ಮುಕ್ತ ಸ್ವಾಗತ ನೀಡಲಾಗುವುದು ಎಂದಿದ್ದಾರೆ.ಯಾರೇ ಪಕ್ಷಕ್ಕೆ ಬಂದರೂ ಟಿಕೆಟ್ ನೀಡುವ ಭರವಸೆ ನೀಡುವುದಿಲ್ಲ. ರಾಜ್ಯದ 224 ಕ್ಷೇತ್ರಗಳಲ್ಲೂ ಒಂದೊಂದು ಕ್ಷೇತ್ರಕ್ಕೆ