ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರೈತ ವಿರೋಧಿಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರಕಾರ ಬರಗಾಲದ ಪರಿಸ್ಥಿತಿಯನ್ನು ಅರಿತು ರೈತರ ಸಾಲವನ್ನು ಮನ್ನಾ ಮಾಡಿದೆ. ಕೇಂದ್ರ ಸರಕಾರ ರಾಜ್ಯದ ರೈತರ ಸಾಲ ಮನ್ನಾ ಮಾಡಲು ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಡಿಯೂರಪ್ಪನವರಿಗೆ ರಾಜ್ಯದ ರೈತರ ಬಗ್ಗೆ ನಿಜವಾದ ಕಾಳಜಿಯಿದ್ದಲ್ಲಿ ಕೇಂದ್ರದಲ್ಲಿರುವ ಮೋದಿ ಸರಕಾರದಿಂದ ಸಾಲ ಮನ್ನಾಗೆ ಒತ್ತಡ ಹೇರುತ್ತಿದ್ದರು. ಆದರೆ, ಬಿಜೆಪಿ ನಾಯಕರು ಕೇವಲ ಸರಕಾರವನ್ನು