ಔರಾದ್ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಿನ್ನಮತ ಮತ್ತೆ ಪ್ರತಿಧ್ವನಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇರಿಸು ಮುರಿಸು ಅನುಭವಿಸಿದರು. ಶಾಸಕ ಪ್ರಭು ಚೌಹಾಣ್ ಮತ್ತು ಕಳೆದ ಬಾರಿ ಕೆಜೆಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸೋತಿದ್ದ ಧಾನಾಜಿ ಜಾಧವ್ ಅವರೊಳಗಿನ ಭಿನ್ನಮತ ಸ್ಫೋಟಗೊಂಡು ಬಹಿರಂಗವಾಗಿ ವಾಗ್ವಾದ ನಡೆದು ತೀವ್ರ ಉದ್ವಿಗ್ನ ಸ್ಥಿತಿಗೆ ಕಾರಣವಾಯಿತು. ಯಡಿಯೂರಪ್ಪ ಅವರು ವೇದಿಕೆಯಲ್ಲಿದ್ದಾಗಲೇ ಪರಸ್ಪರ ಧಿಕ್ಕಾರಗಳನ್ನು ಕೂಗಲಾಯಿತು. ಧಾನಾಜಿ ಅವರ