ಮುಂಬರುವ ವಿಧಾನಸಭೆ ಚುನಾವಣೆಗೆ ಮತದಾರರನ್ನು ಸೆಳೆಯುವ ಉದ್ದೇಶದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಫೆಬ್ರುವರಿ 10ರಂದು ಕೊಳಗೇರಿ ಪ್ರದೇಶಗಳಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ. ಪಕ್ಷದ ಗೆಲುವಿಗೆ ನಿರ್ಣಾಯಕ ಪಾತ್ರ ವಹಿಸಲಿರುವ ಕೊಳೆಗೇರಿ ನಿವಾಸಿಗಳ ಮನಗೆಲ್ಲಲು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೊಳಗೇರಿ ಪ್ರದೇಶದಲ್ಲಿ ವಾಸ್ತವ್ಯ ಹೂಡಲಿರುವ ಯಡಿಯೂರಪ್ಪ ಮಾರನೇ ದಿನ ಕೊಳಗೇರಿ ನಿವಾಸಿಗಳ ಸ್ಥಿತಿಗತಿ ಕುರಿತು ವರದಿ ಬಿಡುಗಡೆ ಮಾಡಲಿದ್ದಾರೆ. ಕೇಂದ್ರದ ಯೋಜನೆಗಳ ಬಗ್ಗೆ ಕೊಳೆಗೇರಿ ಪ್ರದೇಶಗಳ ಜನರಲ್ಲಿ