ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಮೂರುವರೆ ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಮುಖ್ಯಮಂತ್ರಿ ನಮಗೆ ಬೇಕಾ ಎಂದು ಪ್ರಶ್ನೆ ಮಾಡಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಯಡವಟ್ಟು ಮಾಡಿಕೊಂಡಿದ್ದಾರೆ. ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ಅವರು, ಸಿದ್ದರಾಮಯ್ಯ ಹೆಸರು ಹೇಳಲು ಹೋಗಿ ಯಡಿಯೂರಪ್ಪ ಅವರ ಹೆಸರು ಹೇಳಿದ್ದಾರೆ. ವೇದಿಕೆಯಲ್ಲಿ ಕುಳಿತಿದ್ದ ಯಡಿಯೂರಪ್ಪ ತಬ್ಬಿಬ್ಬುಗೊಂಡರು. ಅಧಿಕಾರಿಗಳನ್ನು ಕೆಲಸ ಮಾಡಲು ಬಿಡದೇ ಪದೇ ಪದೇ ವರ್ಗಾವಣೆ ಮಾಡುವ ಮೂಲಕ ಸಿದ್ದರಾಮಯ್ಯ