ಹಾಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಮೆಗಾಫೈಟ್ ಜೋರಾಗಿ ನಡೆಯುತ್ತಿದೆ. ಯಡಿಯೂರಪ್ಪರ ಪುತ್ರ ವಿಜಯೇಂದ್ರರ ಮೇಲೆ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಕುರಿತು ಸಿದ್ದರಾಮಯ್ಯ ಸದನದಲ್ಲಿ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡರು. ಈ ನಡುವೆ ವಿಜಯೇಂದ್ರರನ್ನು ಸಮರ್ಥಿಸಿಕೊಂಡು ಯಡಿಯೂರಪ್ಪ ಮಾತನಾಡಿದರು. ಇವರಿಬ್ಬರ ನಡುವೆ ನಡೆದ ಜಟಾಪಟಿ, ವಾಗ್ವಾದ ಕುತೂಹಲ ಕೆರಳುವಂತೆ ಮಾಡಿತು. ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯರ ಪರ ಬ್ಯಾಟಿಂಗ್ ನಡೆಸಿದರು. ವಿಜಯೇಂದ್ರ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರದ