ಬೆಂಗಳೂರು : ಕಾಂಗ್ರೆಸ್, ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರ ರಾಜೀನಾಮೆ ವಿಚಾರದಲ್ಲಿ ನಾನು ಮಧ್ಯಪ್ರವೇಶಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರ ರಾಜೀನಾಮೆ ವಿಚಾರ ನನಗೆ ಸಂಬಂಧವಿಲ್ಲದ ವಿಷಯ. ಅದು ಸ್ಪೀಕರ್ ಮತ್ತು ರಾಜೀನಾಮೆ ನೀಡಿದ ಶಾಸಕರಿಗೆ ಸಂಬಂಧಿಸಿದ ವಿಚಾರ. ಮುಂಬೈನಲ್ಲಿ ನಮ್ಮ ಪಕ್ಷದ ನಾಯಕರು ಯಾರೂ ಅತೃಪ್ತ ಶಾಸಕರ ಜೊತೆಗೆ ಇಲ್ಲ ಎಂದು ಹೇಳಿದ್ದಾರೆ.