ಪ್ರಧಾನಿ ನರೇಂದ್ರ ಮೋದಿ ಸಾಧನೆ ಮತ್ತು ತಮ್ಮ ಸಾಧನೆಯ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಪಂಥಹ್ವಾನ ನೀಡಿರುವುದು ಮೂರ್ಖತನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ವಿಶ್ವವೇ ಕೊಂಡಾಡುತ್ತಿದೆ. ದೇಶದ ಆರ್ಥಿಕತೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿದ್ದಾರೆ. ಅಂತಹ ಮಹಾನ್ ನಾಯಕನ ಬಗ್ಗೆ ಸಿಎಂ ಚರ್ಚೆ ಮಾಡುತ್ತಾರಂತೆ ಎಂದು ಲೇವಡಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವರ ಸಲಹೆಗಾರ ಕೆಂಪಯ್ಯರೊಂದಿಗೆ ಸೇರಿ