ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನಡುವೆ ದೋಸ್ತಿ ಕುದುರ್ತಿರೋ ಹೊತ್ತಲ್ಲಿಯೇ ಮಾಜಿ ಸಿಎಂ ಯಡಿಯೂರಪ್ಪ ದೆಹಲಿಗೆ ಹೊರಟುನಿಂತಿದ್ದಾರೆ. ಬುಧವಾರ ವರಿಷ್ಠರನ್ನು ಭೇಟಿ ಮಾಡಲಿರುವ ಮಾಜಿ ಸಿಎಂ, ಮೈತ್ರಿ ಸೇರಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಎಷ್ಟು ಕ್ಷೇತ್ರಗಳನ್ನು ಉಳಿಸಿಕೊಂಡ್ರೆ ಉತ್ತಮ, ಎಷ್ಟು ಸೀಟ್ಗಳನ್ನು ಪಡೆಯಬೇಕು..? ಎಲ್ಲೆಲ್ಲಿ ಪಕ್ಷದ ಸ್ಥಿತಿಗತಿ ಹೇಗಿದೆ ಎಂಬೆಲ್ಲಾ ವಿಚಾರಗಳ ಬಗ್ಗೆ ಯಡಿಯೂರಪ್ಪ ವರದಿ ಸಲ್ಲಿಸಲಿದ್ದಾರೆ.ಇತ್ತ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿಯ ಪದಾಧಿಕಾರಿಗಳ ಸಭೆ