ಕೊಲೆಗಡುಕ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗಿ ಭಾಷಣ ಆರಂಭಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಶಾಂತಿಗೆ ಹೆಸರಾಗಿದ್ದ ಕರ್ನಾಟಕದಲ್ಲಿ ಅಶಾಂತಿ ಸೃಷ್ಟಿಸಿದ್ದೀರಿ. ಸಿದ್ದರಾಮಯ್ಯನವರೇ ನಿಮ್ಮ ರಾಜಕೀಯ ದೊಂಬರಾಟ ನಡೆಯುವುದಿಲ್ಲ.. ರಾಜ್ಯ ಸರಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿಲ್ಲ ಎಂದು ಗುಡುಗಿದರು. ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಸಚಿವ ಕೆ.ಜೆ.ಜಾರ್ಜ್ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಿಬಿಐ