ಪರಪ್ಪನ ಅಗ್ರಹಾರ ಜೈಲಿನಲ್ಲಿನ ಅವ್ಯವಹಾರ ಬಯಲಿಗೆಳೆದಿರುವುದು ತಪ್ಪಾ? ತಮಿಳುನಾಡಿನ ಎಐಎಢಿಎಂಕೆ ನಾಯಕಿ ಶಶಿಕಲಾಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ವರದಿ ಸಲ್ಲಿಸಿರುವುದು ತಪ್ಪಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೈಲಿನಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ನೋಡಿ ಕಣ್ಣುಮುಚ್ಚಿಕೊಂಡಿರಬೇಕಾಗಿತ್ತಾ? ಸತ್ಯ ವರದಿ ಮಾಡಿದ್ದಕ್ಕೆ ವರ್ಗಾವಣೆ ಶಿಕ್ಷೆ ಎನ್ನುವುದಾದರೇ ಮುಂದೆ ಯಾವ ಅಧಿಕಾರಿಯೂ ಪ್ರಾಮಾಣಿಕವಾಗಿ ವರದಿ ನೀಡುವುದಿಲ್ಲ ಎಂದು ಕಿಡಿಕಾರಿದ್ದಾರೆ. ರಾಜ್ಯ ಸರಕಾರ ಪ್ರಾಮಾಣಿಕ ಅಧಿಕಾರಿಗೆ ವರ್ಗಾವಣೆ ಮಾಡಿ ನಿಷ್ಠಾವಂತ