ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ನಿದ್ರೆಗೆ ಜಾರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡಾ ವೇದಿಕೆಯಲ್ಲಿಯೇ ನಿದ್ರೆಗೆ ಜಾರಿರುವುದು ಅಚ್ಚರಿ ಮೂಡಿಸಿತು. ಬಿಜೆಪಿ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ, ಕೇಂದ್ರ ಸರಕಾರದ ಸಾಧನೆಗಳ ಬಗ್ಗೆ ಭಾಷಣ ಮಾಡುತ್ತಿದ್ದರೆ, ಅದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ಯಡಿಯೂರಪ್ಪ ನಿದ್ರಾದೇವಿಗೆ ಶರಣಾಗಿದ್ದರು ಎಂದು ಮೂಲಗಳು ತಿಳಿಸಿವೆ. ಸಿಎಂ ಸಿದ್ದರಾಮಯ್ಯ ಪದೇ ಪದೇ ವೇದಿಕೆಗಳಲ್ಲಿ ನಿದ್ರೆಗೆ ಜಾರುತ್ತಿರುವ ಬಗ್ಗೆ ಬಿಜೆಪಿ ಮುಖಂಡರು ವ್ಯಾಪಕವಾಗಿ