ಹೈವೋಲ್ಟೇಜ್ ಕದನ ಮಂಡ್ಯದಲ್ಲಿ ಜೋಡೆತ್ತುಗಳಾಗಿ ಭರ್ಜರಿ ಪ್ರಚಾರ ನಡೆಸಿದ ನಟ ಯಶ್ ಮತ್ತು ದರ್ಶನ್ ರನ್ನು ಭೇಟಿ ಮಾಡೋದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಮಂಡ್ಯದಲ್ಲಿ ಸುಮಲತಾ ಗೆಲುವು ಸಾಧಿಸಿರುವ ಬೆನ್ನಲ್ಲೇ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪನವರು ಸುಮಲತಾ ಅಂಬರೀಶ್ ಗೆಲುವಿಗೆ ಕಾರಣವಾಗಿರುವ ನಟರನ್ನು ಭೇಟಿ ಮಾಡುವುದಾಗಿ ತಿಳಿಸಿದ್ರು.ರಾಜ್ಯದಲ್ಲಿ ಬಿಜೆಪಿ 22 ಸ್ಥಾನಗಳನ್ನು ಗಳಿಸುತ್ತದೆ ಎಂದು ನಾನು ಅಂದಾಗ ಯಾರೂ ನಂಬಲಿಲ್ಲ. ಮಾಧ್ಯಮದವರು, ಜೆಡಿಎಸ್ ಹಾಗೂ ಕಾಂಗ್ರೆಸ್ ನವರೂ ನಂಬಲಿಲ್ಲ. ಆದರೆ ನಾವು