ಶಿವಮೊಗ್ಗ: ಸಾಗರ ವಿಧಾನಸಭೆ ಟಿಕೆಟ್ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಹರತಾಳು ಹಾಲಪ್ಪ ಕಾಂಗ್ರೆಸ್ ಸೇರ್ಪಡೆಗೆ ಮನಸ್ಸು ಮಾಡಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಂಧಾನ ಮಾತುಕತೆ ನಡೆಸಿದ್ದು, ಬಹುತೇಕ ಪಕ್ಷದಲ್ಲೇ ಉಳಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.ಎರಡು ದಿನಗಳಿಂದ ಬಿಜೆಪಿ ನಾಯಕರ ಕೈಗೆ ಸಿಗದೇ ಓಡಾಡುತ್ತಿದ್ದ ಹಾಲಪ್ಪ ಕೊನೆಗೂ ಯಡಿಯೂರಪ್ಪ ಜತೆ ಮಾತುಕತೆ ನಡೆಸಿದ್ದಾರೆ. ಶೋಭಾಕರಂದ್ಲಾಜೆ ಮಧ್ಯಸ್ಥಿಕೆಯಲ್ಲಿ ಸಂಧಾನ ಮಾತುಕತೆ ನಡೆಸಿದ ಯಡಿಯೂರಪ್ಪ, ಪಕ್ಷದ ಸ್ಥಿತಿ ಗತಿಯನ್ನು ಮನವರಿಕೆ ಮಾಡಿಕೊಡಲು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.ನಿಮಗೆ ಟಿಕೆಟ್