ಎತ್ತಿನಹೊಳೆ ಯೋಜನೆಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಯಾವುದೇ ತೊಂದರೆ ಆಗದು. ಸಮಸ್ಯೆ ಎದುರಾಗದಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಎತ್ತಿನಹೊಳೆ ಯೋಜನೆ ಉದ್ದೇಶ ಮತ್ತು ವಸ್ತುಸ್ಥಿತಿ ಮನವರಿಕೆ ಮಾಡಿಕೊಡುವ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯವರು ಸಭೆ ಕರೆದಿದ್ದರು. ಸಭೆಯಲ್ಲಿ ಭಾಗವಹಿಸಿದ್ದ ಉಭಯ ಜಿಲ್ಲೆಗಳ ಜನಪ್ರತಿನಿಧಿಗಳು, ವಿವಿಧ ಪಕ್ಷಗಳ ಮುಖಂಡರು ಮತ್ತು ನಾನಾ ಸಂಘಟನೆಗಳ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಯವರು ಈ ಭರವಸೆ ನೀಡಿದರು.